ಮಾಸ್ಕ್ ಧರಿಸಿ ರಾಜ್ಯಸಭೆ ಕಲಾಪಕ್ಕೆ ಹಾಜರಾದ 'ಪ್ರಧಾನಿ ಮೋದಿ'

ವಿಶ್ವದಾದ್ಯಂತ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ನಡುವೆ, ಪ್ರಧಾನಿ ಮೋದಿ ಮತ್ತು ಇತರ ಹಲವಾರು ಸಂಸದರು ರಾಜ್ಯಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸುತ್ತಿದ್ದಂತೆ ಮಾಸ್ಕ್ ಧರಿಸಿರುವುದು ಕಂಡುಬಂದಿದೆ. ಎಎನ್‌ಐ ಹಂಚಿಕೊಂಡಿರುವ ಚಿತ್ರದಲ್ಲಿ, ಪ್ರಧಾನಿ ಮೋದಿ & ಹಲವಾರು ಸಂಸದರು ಮಾಸ್ಕ್ ಧರಿಸಿರುವುದು ಕಂಡುಬಂದಿದೆ. ಅದ್ರಂತೆ, ಭಾರತದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.