ಮೀಸಲಾತಿ ಹೆಚ್ಚಳ; ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಲಾಗುವುದು ಎಂದ ಕಾಗೇರಿ

ಮೀಸಲಾತಿ ಹೆಚ್ಚಳ; ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಲಾಗುವುದು ಎಂದ ಕಾಗೇರಿ

ಬೆಳಗಾವಿ: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಇರುವ ಕಾನೂನಾತ್ಮಕ ಅವಕಾಶ & ಅಡ್ಡಿಗಳ ಬಗ್ಗೆ ಚರ್ಚಿಸಲು ಸಮಯ ನಿಗದಿ ಮಾಡುವುದಾಗಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಈ ಬಗ್ಗೆ ಚರ್ಚಿಸಲು ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಲು ಮುಂದಾದ ಸಿದ್ದರಾಮಯ್ಯ, ಮೀಸಲಾತಿ ಹೆಚ್ಚಳದ ಪರವಾಗಿ ನಾವಿದ್ದೇವೆ. ಆದರೆ, ನೀವು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಆದೇಶ ಹೊರಡಿಸಿದ್ದೀರಿ. ಇದು ಸಂವಿಧಾನಕ್ಕೆ ಸಂಬಂಧಿಸಿದ ವಿಷಯವಾಗಿದ್ದರಿಂದ ಚರ್ಚೆಗೆ ಅವಕಾಶ ಕೊಡಬೇಕು ಎಂದರು.