ಮುಂದಿನ 2-3 ದಿನಗಳಲ್ಲಿ 'JDS' ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ : H.D ಕುಮಾರಸ್ವಾಮಿ

ಮುಂದಿನ 2-3 ದಿನಗಳಲ್ಲಿ 'JDS' ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ : H.D ಕುಮಾರಸ್ವಾಮಿ

ಬೆಂಗಳೂರು : ಮುಂದಿನ 2-3 ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತದೆ. ಈ ಬಾರಿ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 123 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಇಂದು ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಹಲವು ಪಕ್ಷಗಳು ಮತದಾರರಿಗೆ ಆಮಿಷವೊಡ್ಡುತ್ತಿದೆ. ರಾಷ್ಟ್ರೀಯ ಪಕ್ಷಗಳು ವಾಚ್, ತವಾ ಹಂಚುತ್ತಿದೆ ಎಂದು ಆರೋಪ ಮಾಡಿದೆ. ಮುಂದಿನ 2-3 ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತದೆ. ಈ ಬಾರಿ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 123 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಭವಾನಿಗೆ ಹಾಸನ ಟಿಕೆಟ್ ಇಲ್ಲ, ಈ ನಿರ್ಧಾರಕ್ಕೆ ನಾನು ಬದ್ದನಾಗಿದ್ದೇನೆ ಎಂದು ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಒಂದೇ ದಿನ 1.85 ಕೋಟಿ ಹಣ, 3.4 ಕೆಜಿ ಚಿನ್ನ ಜಪ್ತಿ

ಬೆಂಗಳೂರು : ಚುನಾವಣೆ ಹೊತ್ತಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 1.85 ಕೋಟಿ ನಗದು, 3.4 ಕೆಜಿ ಚಿನ್ನಾಭರಣ ಹಾಗೂ 36 ಕೆಜಿ ಬೆಳ್ಳಿ ಆಭರಣಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಹಲಸೂರು ಗೇಟ್ ಬಳಿ 35 ಲಕ್ಷ, ಎಸ್ ಜೆ ಪಾರ್ಕ್ ಬಳಿ 10 ಲಕ್ಷ, ಲಗ್ಗೆರೆಯ ಬಳಿ 1 ಕೋಟಿ, ಅಮೃತಳ್ಳಿ ಬಳಿ 30 ಲಕ್ಷ, ಬೆಂಗಳೂರು ಗಡಿ ಭಾಗದಲ್ಲಿ 10 ಲಕ್ಷ ರೂ ಹಣ ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅದೇ ರೀತಿ ಕೋಟ್ಯಾಂತರ ರೂ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ.ಇನ್ನೂ ಕೋರಮಂಗಲದಲ್ಲಿ536 ಸೀರೆ, 504 ಕುಕ್ಕರ್ ಸೇರಿದಂತೆ ಸಾಕಷ್ಟು ವಸ್ತುಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.