ಮುಂದಿನ ಚುನಾವಣೆಗೆ ನಾನು ಸ್ವತಂತ್ರವಾಗಿ ಸ್ಪರ್ಧೆ; ಪ್ರಮೋದ್ ಮುತಾಲಿಕ್

ರಾಮನಗರ: ಮುಂದಿನ ಚುನಾವಣೆಗೆ ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ. ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ ಸ್ಪರ್ಧೆ ಮಾಡ್ತೇನೆ ಎಂದು ರಾಮನಗರ ಪ್ರವಾಸಿ ಮಂದಿರದಲ್ಲಿ ಶ್ರೀ ರಾಮ ಸೇನೆ ಸಂಸ್ಥಾಪಕ, ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಡಿಸೆಂಬರ್ ಎರಡನೇ ವಾರದಲ್ಲಿ ಯಾವ ಕ್ಷೇತ್ರ ಎಂದು ಫೈನಲ್ ಮಾಡ್ತೇನೆ ಎಂದು ತಿಳಿಸಿದರು.