ಮುಂದಿನ ತಿಂಗಳಲ್ಲೇ 7ನೇ ವೇತನ ಆಯೋಗ ಜಾರಿ - ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಮುಂದಿನ ತಿಂಗಳಲ್ಲೇ 7ನೇ ವೇತನ ಆಯೋಗ ಜಾರಿ - ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಗೆ ಈಡೇರಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅಸ್ತು ಎಂದಿದ್ದಾರೆ. 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಮಾರ್ಚ್ ಗೆ ಜಾರಿಗೊಳಿಸೋದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಈ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆಯಲ್ಲಿ ಮಾತನಾಡಿದಂತ ಅವರು, ಈಗಾಗಲೇ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಆಯೋಗದ ಶಿಫಾರಸ್ಸು ಆಧಿರಿಸಿ ಮುಂದಿನ ಕ್ರಮ ವಹಿಸಲು 2023-24ನೇ ಸಾಲಿನ ಬಜೆಟ್ ನಲ್ಲಿ ಹಣವನ್ನು ಹೊಂದಿಸಿಡಲಾಗಿದೆ ಎಂದರು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧವಾಗಿದೆ. 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು, ಮಾರ್ಚ್ ನೊಳಗೆ ಯೋಜನೆಯನ್ನು ಜಾರಿಗೊಳಿಸುವಂತೆ ಸೂಚಿಸಲಾಗುವುದು. ಮಧ್ಯಂತರ ವರದಿಯನ್ನು ಅವಲೋಕಿಸಿ 2023-24ನೇ ಸಾಲಿನಿಂದಲೇ ಜಾರಿಗೊಳಿಸಲಾಗಲು ಸಿದ್ಧರಿದ್ದೇವೆ ಎಂದು ಘೋಷಣೆ ಮಾಡಿದರು.

ಇನ್ನೂ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ ಸಹಾಯ ಧನವನ್ನು ನೀಡೋದಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಈ ಹಣವನ್ನು ದುಪ್ಪಟ್ಟುಗೊಳಿಸಲಾಗುತ್ತಿದೆ. 500 ರೂ ನಿಂದ 1000ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಶಾಲಾ ಕಾಲೇತುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1000 ಹೊಸ ಕಾರ್ಯಾಚರಣೆಗೆ ಮಕ್ಕಳ ಬಸ್ ಯೋಜನೆ ಘೋಷಿಸಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗಲು 2000 ಹೊಸ ಕಾರ್ಯಾಚರಣೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.