ಮುಂದಿನ ತಿಂಗಳು ರಾಜ್ಯದಲ್ಲಿ 2 ಹೊಸ 'ವಿಮಾನ ನಿಲ್ದಾಣ' ಆರಂಭ
ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್..ಫೆಬ್ರವರಿಯಲ್ಲಿ ರಾಜ್ಯದಲ್ಲಿ 2 ಹೊಸ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದೆ.
ಹೌದು, ಶಿವಮೊಗ್ಗ ಹಾಗೂ ವಿಜಯಪುರದಲ್ಲಿ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಈಗಾಗಲೇ ನಿಲ್ದಾಣದ ಕಾಮಗಾರಿಗಳು ಬಹುತೇಕ ಮುಗಿದಿದೆ .
ಇನ್ನೂ, ಮಲೆನಾಡು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಇದೇ ಫೆಬ್ರವರಿ 27ರಂದು ಉದ್ಘಾಟನೆಗೊಳ್ಳಲಿದೆ.ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಡಲಿದ್ದಾರೆ. ಫೆಬ್ರವರಿ 27ರಂದು ಶಿವಮೊಗ್ಗದಿಂದ ಬೆಂಗಳೂರು ನಡುವೆ ಮೊದಲ ವಿಮಾನ ಹಾರಾಟ ನಡೆಯಲಿದೆ ಎಂದು ಕರ್ನಾಟಕ ಬಿಜೆಪಿ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರಶಿವಮೊಗ್ಗ ವಿಮಾನ ನಿಲ್ದಾಣ ಕರ್ನಾಟಕದ ಅತಿ ದೊಡ್ಡ ರನ್ ವೇ ಹೊಂದಿರುವ ಎರಡನೇ ವಿಮಾನ ನಿಲ್ದಾಣ ಆಗಲಿದೆ.
ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀ ವಿಮಾನ ನಿಲ್ದಾಣ ಅತಿ ದೊಡ್ಡ ರನ್ ವೇ ಹೊಂದಿರುವ ವಿಮಾನ ನಿಲ್ದಾಣವಾಗಿದೆ.ಶಿವಮೊಗ್ಗದಲ್ಲಿ 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣವು 662.38 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. 45 ಮೀಟರ್ ಅಗಲದ 3,200 ಮೀಟರ್ ಉದ್ದದ ರನ್ ವೇ ಹೊಂದಿದೆ.
ಸಾಂದರ್ಭಿಕ ಚಿತ್ರ