ಶಾಲಾ ವಿದ್ಯಾರ್ಥಿಗಳಿಗೆ 'ಗುಡ್ ನ್ಯೂಸ್' : ಮುಂದಿನ ಶೈಕ್ಷಣಿಕ ಸಾಲಿನ ಆರಂಭದಲ್ಲೇ 'ಸಮವಸ್ತ್ರ' ವಿತರಣೆ

ಶಾಲಾ ವಿದ್ಯಾರ್ಥಿಗಳಿಗೆ 'ಗುಡ್ ನ್ಯೂಸ್' : ಮುಂದಿನ ಶೈಕ್ಷಣಿಕ ಸಾಲಿನ ಆರಂಭದಲ್ಲೇ 'ಸಮವಸ್ತ್ರ' ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್, ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಉತ್ಸವ ನಡೆಸುತ್ತೀರಿ. ನಿಮಗೆ ಮಕ್ಕಳಿಗೆ ಸಮವಸ್ತ್ರ ನೀಡಲು ಆಗುದಿಲ್ವಾ? ನಾಚಿಕೆಯಾಗಬೇಕು ನಿಮಗೆ ಎಂದು ಸರ್ಕಾರಕ್ಕೆ ಎಂಬುದಾಗಿ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ಒಂದು ಜೊತೆ ಸಮವಸ್ತ್ರ ವಿತರಿಸುವುದಾಗಿ ಹೇಳಿದೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2022-23) ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಈಗಾಗಲೇ 2 ಜೊತೆ ಸಮವಸ್ತ್ರ ಮತ್ತು ಶೂ-ಸಾಕ್ಸ್ ವಿತರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ (2023-24) ಆರಂಭದಲ್ಲೇ ಸಮವಸ್ತ್ರ ವಿತರಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ (1 ಜೊತೆ ಸಮವಸ್ತ್ರ) ಪೂರ್ಣಗೊಳಿಸಲಾಗಿದ್ದು, ಕಾರ್ಯಾದೇಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.