ಮುಂದುವರೆದ ಟಿಕೆಟ್ ಆಕಾಂಕ್ಷಿಗಳ ಕಸರತ್ತು , ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಶಿಕುಮಾರ್

ಮುಂದುವರೆದ ಟಿಕೆಟ್ ಆಕಾಂಕ್ಷಿಗಳ ಕಸರತ್ತು , ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಶಿಕುಮಾರ್

ಬೆಂಗಳೂರು : ನಟ, ಮಾಜಿ ಸಂಸದ ಶಶಿಕುಮಾರ್ ಅವರು ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಆರ್ ಟಿ ನಗರ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ನಟ ಶಶಿಕುಮಾರ್ ಚಳ್ಳಕರೆ, ಮೊಳಕಾಲ್ಮೂರು ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಬಗ್ಗೆ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಂಯುಕ್ತ ಜನತಾದಳದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ನಟ ಶಶಿಕುಮಾರ್ ಒಂದು ಬಾರಿ ಚಿತ್ರದುರ್ಗ ಲೋಕಸಭೆಗೆ ಆಯ್ಕೆಯಾಗಿದ್ದರು. 2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಸದುರ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಏ.6&7ರಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ; ಪ್ರಹ್ಲಾದ್ ಜೋಶಿ

ಬೆಳಗಾವಿ: ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಏಪ್ರಿಲ್ 6 ಮತ್ತು 7 ರಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹವಾಗುತ್ತದೆ. ಶೀಘ್ರದಲ್ಲೇ ಅಭ್ಯರ್ಥಿ ಪಟ್ಟಿ ರಿಲೀಸ್ ಆಗಲಿದೆ ಎಂದರು.ಗ್ಯಾರಂಟಿ ಕಾರ್ಡ್ ತೋರಿಸಿ ಕಾಂಗ್ರೆಸ್ ಜನರಿಗೆ ಸುಳ್ಳು ಆಶ್ವಾಸನೆ ನೀಡುತ್ತಿದೆ. ಕಾಂಗ್ರೆಸ್ ನ ಸುಳ್ಳಿನ ಆಶ್ವಾಸನೆಗಳನ್ನು ಜನ ನಂಬುವುದಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.