ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ಗಳ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ಸಾಲಿನ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅ.31ರವರೆಗೆ ಕಾಲಾವಕಾಶ ವಿಸ್ತರಿಸಿದೆ. ಮಲ್ಲೇಶ್ವರದ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಅರ್ಹ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು ಎಂದು ತಿಳಿಸಿದೆ.
ಪದವಿ ವಿಭಾಗದಲ್ಲಿ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ, ಸ್ನಾತಕೋತ್ತರ ವಿಭಾಗದಲ್ಲಿ ಎಂಎ, ಎಂಸಿಜೆ, ಎಂಕಾಂ, ಬಿಎಲ್ಐಎಸ್ಸಿ, ಎಂಎಲ್ಐಎಸ್ಸಿ, ಎಂಎಸ್ಸಿ, ಎಂಬಿಎ, ಪಿಜಿ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್, ಡಿಪ್ಲೊಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್ಗಳಿಗೆ ಪ್ರವೇಶ ಲಭ್ಯವಿದೆ. ಆಸಕ್ತರು ವಿವಿಯ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಬೆಂಗಳೂರಿನ ಪ್ರಾದೇಶಿಕ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಶುಲ್ಕ ಪಾವತಿಸಿ ಪ್ರವೇಶ ಪಡೆಯಬಹುದು ಎಂದು ವಿಭಾಗದ ನಿರ್ದೇಶಕರಾದ ಜೆ.ಶಶಿಕಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು.