ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿದ್ದು ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆಯಿದೆ. ಅದಕ್ಕೆ ಕಾರಣ ಸಚಿವ ಸಂಪುಟ ವಿಸ್ತರಣೆ ಮತ್ತು ಸಚಿವ ಸ್ಥಾನ ಸಿಗದಿರುವ ಆಕಾಂಕ್ಷಿಗಳ ಅಸಮಾಧಾನವನ್ನು ತಣಿಸುವ ಕುರಿತು ಚರ್ಚೆಗಾಗಿ. ಬೆಳಗಾವಿ/ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿದ್ದು ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆಯಿದೆ. ಅದಕ್ಕೆ ಕಾರಣ ಸಚಿವ ಸಂಪುಟ ವಿಸ್ತರಣೆ ಮತ್ತು ಸಚಿವ ಸ್ಥಾನ ಸಿಗದಿರುವ ಆಕಾಂಕ್ಷಿಗಳ ಅಸಮಾಧಾನವನ್ನು ತಣಿಸುವ ಕುರಿತು ಚರ್ಚೆಗಾಗಿ.
ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಸಿಗದ್ದಕ್ಕೆ ತೀವ್ರ ಬೇಸರಗೊಂಡಿದ್ದ ಹಿರಿಯ ಶಾಸಕರಾದ ಕೆ.ಎಸ್.ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಮಾತುಕತೆ ನಡೆಸಿದ್ದು, ಸಂಧಾನ ಫಲಪ್ರದವಾಗಿದೆ. ಉಭಯ ನಾಯಕರ ಸಮ್ಮುಖದಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಮುಂದಿನ ವಾರ ಸಂಪುಟದ ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಅಧಿವೇಶನದ ಕಾರ್ಯಕಲಾಪ ನೋಡಿಕೊಂಡು ಬರುವ ಸೋಮವಾರವೇ ದೆಹಲಿಗೆ ತೆರಳುವ ಸಾಧ್ಯತೆಯಿದೆ. ವರಿಷ್ಠರು ಒಪ್ಪಿದರೆ ಜನವರಿ ಮೊದಲ ವಾರದಲ್ಲೇ ಇಬ್ಬರಿಗೂ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.