ಮುಜುಗರದಿಂದ ತಪ್ಪಿಸಿಕೊಳ್ಳಲು ಶೇ 50ರಷ್ಟು ಟೆಸ್ಟಿಂಗ್‌ ಪ್ರಮಾಣ ಕಡಿತ ಮಾಡಿದ BBMP.!?

ಬೆಂಗಳೂರು: ಮುಜುಗರದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಬಿಬಿಎಂಪಿ ಟೆಸ್ಟಿಂಗ್‌ ಪ್ರಮಾಣದಲ್ಲಿ ಶೇ 50ರಷ್ಟು ಕಡಿತ ಮಾಡಿದೆ ಎನ್ನುವ ಆರೋಪ ಕೇಳಿ ಬಂದಿದೆ.ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಕರೋನ ಸೊಂಕಿನ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಇದಕ್ಕೆ ಕಾರಣ ಟೆಸ್ಟಿಂಗ್‌ ಕಮ್ಮಿ ಎನ್ನಲಾಗುತ್ತಿದೆ. ಈ ಹಿಂದೆ ಒಂದು ಲಕ್ಷ ಮಂದಿಗೆ ಪರೀಕ್ಷೆ ಮಾಡುತ್ತಿದ್ದಾಗ 20 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ಕಂಡು ಬರುತ್ತಿದ್ದವು, ಈ ಹಿನ್ನಲೆಯಲ್ಲಿ ಸೋಂಕು ಕೂಡ ಹೆಚ್ಚಾಗಿ ಕಂಡು ಬರುತ್ತಿದ್ದವು. ಈ ನಡುವೆ ಇಂದು ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಂವಾದದಲ್ಲಿ ಬೆಂಗಳೂರು ಬಿಬಿಎಂಪಿ ಆಯಕ್ತ ಗೌರವ್‌ ಗುಪ್ತ ಅವರು ಮೋದಿಯವರಿಗೆ ಬೆಂಗಳೂರಿನಲ್ಲಿ ಲಾಕ್‌ಡೌನ್‌ನಿಂದಾಗಿ ಸೊಂಕು ಕಡಿಮೆಯಾಗುತ್ತಿದೆ, ಕಟ್ಟು ನಿಟ್ಟಿನ ಕ್ರಮದಿಂದಾಗಿ ಬೆಂಗಳೂರಿನಲ್ಲಿ 10 ಸಾವಿರ ಕಮ್ಮಿಯಾಗಿದೆ ಅಂತ ಹೇಳಿದ್ದಾರೆ. ಆದರೆ ನಂಬರ್ಲಹ ಸುದ್ದಿಗಳ ಪ್ರಕಾರ ಜಾಗತೀಕ ಮಟ್ಟದಲ್ಲಿ ಮುಜುಗರದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಹೆಚ್ಚಿನ ಟೆಸ್ಟ್‌ ಅನ್ನು ನಡೆಸುತ್ತಿಲ್ಲ ಎನ್ನಲಾಗಿದೆ. ಒಟ್ಟಿನಲ್ಲಿ ಯಾರನ್ನು ಮೆಚ್ಚಿಸಲು ಬಿಬಿಎಂಪಿ ಸುಳ್ಳು ಹೇಳುತ್ತಿದೆ ಎನ್ನುವುದು ತಿಳಿಯುತ್ತಿಲ್ಲ ಅಂತ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಒಂದು ವೇಳೆ ಕರೋನ ಸೊಂಕು ಮತ್ತೆ ಹೆಚ್ಚಳವಾದ್ರೇ ಅದರ ಹೊಣೆಯನ್ನು ಯಾರು ಹೊರುತ್ತಾರೆ ಎನ್ನುವುದು ಈಗ ಪ್ರಶ್ನೆಯಾಗಿದೆ.

ಮುಜುಗರದಿಂದ ತಪ್ಪಿಸಿಕೊಳ್ಳಲು ಶೇ 50ರಷ್ಟು ಟೆಸ್ಟಿಂಗ್‌ ಪ್ರಮಾಣ ಕಡಿತ ಮಾಡಿದ BBMP.!?