ಮುರುಘಾ ಶ್ರೀ ವಿರುದ್ಧ ಪಿತೂರಿ ಆರೋಪ : ಬಸವರಾಜನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 12 ರವರೆಗೆ ವಿಸ್ತರಣೆ ಮಾಡಲಾಗಿದೆ.
ಇಂದು ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಅಪರ ಜಿಲ್ಲಾ ನ್ಯಾಯಾಲಯ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ಜಾಮೀನು ಅರ್ಜಿಯನ್ನು ಡಿಸೆಂಬರ್ 12 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಇಂದು ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಬಸವರಾಜ್ ನನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ಡಿಸೆಂಬರ್ 12 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.