ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ; ಸೌಭಾಗ್ಯ ಬಸವರಾಜನ್ ಅರೆಸ್ಟ್
ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ತಡರಾತ್ರಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನ.9 ರಂದು ಬಸವರಾಜನ್, ಸೌಭಗ್ಯ ವಿರುದ್ಧ ದೂರು ದಾಖಲಾಗಿತ್ತು. ಸದ್ಯ ಸೌಭಾಗ್ಯ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದು, ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.