ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮೆಡಿಕಲ್ ರಿಪೋರ್ಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಚಿತ್ರದುರ್ಗ : ಮುರುಘಾಮಠದ ಮುರುಘಾಶ್ರೀಗಳ ವಿರುದ್ಧ ಪೋಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂಬ ಸ್ಪೋಟಕ ವರದಿ ಬಂದಿದೆ.
ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯ ವೈದ್ಯರು ಮೊದಲ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತರ ಮೆಡಿಕಲ್ ರಿಪೋರ್ಟ್ ವರದಿಯಲ್ಲಿ ಅತ್ಯಾಚಾರ ಆಗಿಲ್ಲ ಎಂದು ವರದಿ ಬಂದಿದೆ.
ಕಳೆದ ವರ್ಷ ಸಪ್ಟೆಂಬರ್ನಲ್ಲಿ ಮುರುಘಾ ಮಠದ ಸ್ವಾಮೀಜಿ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರು ಅತ್ಯಾಚಾರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಇಬ್ಬರು ಅಪ್ರಾಪ್ತೆಯರ ಪರೀಕ್ಷೆ ನಡೆಸಿದ್ದರು. ಆದರೀಗ ಈ ವರದಿಯಲ್ಲಿ ಸಂತ್ರಸ್ತೆಯರ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.