ಮುರುಘಾಶ್ರೀಗಳನ್ನು ಪೀಠದಿಂದ ಕೆಳಗಿಳಿಸುವ ಸುಳಿವು ನೀಡಿದ ಸಚಿವ ಆರ್.ಅಶೋಕ್

ಮುರುಘಾಶ್ರೀಗಳನ್ನು ಪೀಠದಿಂದ ಕೆಳಗಿಳಿಸುವ ಸುಳಿವು ನೀಡಿದ ಸಚಿವ ಆರ್.ಅಶೋಕ್

ರಾಯಚೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಶರಣರ ಪೀಠ ತ್ಯಾಗಕ್ಕಾಗಿ ಒತ್ತಡಗಳು ಹೆಚ್ಚುತ್ತಿದ್ದು, ಸಧ್ಯದಲ್ಲಿಯೇ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ನಿನ್ನೆ ಮುರುಘಾ ಮಠದ ಹಲವರು ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಮಠದಲ್ಲಿನ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ. ಹಲವು ವಿಚಾರಗಳ ಚರ್ಚೆ ನಡೆದಿದೆ. ಶ್ರೀಗಳನ್ನು ಕೆಳಗಿಳಿಸುವ ವಿಚಾರವಾಗಿ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮಠದ ಭಕ್ತರು, ಮುಖ್ಯಸ್ಥರ ಸಲಹೆ ಸೂಚನೆಗಳನ್ನು ಸಿಎಂ ಪಡೆದುಕೊಂಡಿದ್ದಾರೆ. ಪೀಠಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.