ಮುಸ್ಲಿಂ 2ಬಿ ರದ್ದು ವಿರುದ್ಧ ಹೈಕೋರ್ಟ್ ಗೆ ಅರ್ಜಿ : ಮೇ. 14 ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಸ್ಲೀಮರಿಗೆ ನೀಡಿದ್ದಂತ 2ಬಿ ಒಳ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಾಪೀಠವು ಮೇ.14ಕ್ಕೆ ಮುಂದೂಡಿಕೆ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಿದ್ದಂತ ರಾಜ್ಯ ಸಚಿವ ಸಂಪುಟದ ಕೊನೆಯ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಪರಿಷ್ಕರಿಸುವಂತ ನಿರ್ಧಾರ ಕೈಗೊಳ್ಳಲಾಗಿತ್ತು. ಅಲ್ಲದೇ ಮುಸ್ಲೀಮರಿಗೆ ನೀಡಲಾಗಿದ್ದಂತ 2ಬಿ ಮೀಸಲಾತಿಯನ್ನು ರದ್ದುಗೊಳಿಸಿ EWSನಲ್ಲಿ ಅವಕಾಶ ಕಲ್ಪಿಸಲಾಗಿತ್ತು.
ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೊಹಮ್ಮದ್ ಆರೀಫ್ ಜಮೀಲ್ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯಲ್ಲಿ ಕಾನೂನು ಬಾಹಿರವಾಗಿ 2ಬಿ ಮೀಸಲಾತಿ ರದ್ದುಗೊಳಿಸಲಾಗಿದೆ. ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡುವಂತೆಯೂ ಮನವಿ ಮಾಡಲಾಗಿತ್ತು. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಂತ ಹೈಕೋರ್ಟ್ ನ್ಯಾಯಪೀಠವು, ವಿಚಾರಣೆಯನ್ನು ಮೇ.14ಕ್ಕೆ ಮುಂದೂಡಿಕೆ ಮಾಡಿದೆ.
ಚುನಾವಣೆ ಹೊತ್ತಿನಲ್ಲೇ 'ಡಿ.ಕೆ ಶಿವಕುಮಾರ್'ಗೆ ಬಿಗ್ ರಿಲೀಫ್: ಏ.6ರವರೆಗೆ ಮಧ್ಯಂತ ತಡೆಯಾಜ್ಞೆ ವಿಸ್ತರಣೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದಂತ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಂದು ಹೈಕೋರ್ಟ್ ಏಪ್ರಿಲ್ 6ರವರೆಗೆ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಚುನಾವಣೆ ಹೊತ್ತಿನಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ( KPCC President DK Shivakumar ) ಬಿಗ್ ರಿಲೀಫ್ ನೀಡಿದೆ.
ಇಂದು ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ( Karnataka High Court ) ನ್ಯಾಯಪೀಠ ನಡೆಸಿತು. ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸುವಂತ ಅರ್ಜಿ ಮಾನ್ಯ ಮಾಡಿದ ಕೋರ್ಟ್ ಏಪ್ರಿಲ್ 6ರವರೆಗೆ ವಿಸ್ತರಿಸಿದೆ.
ಅಂದಹಾಗೆ ಇದಲ್ಲದೇ ಡಿ.ಕೆ ಶಿವಕುಮಾರ್ ಸಿಬಿಐ ತನಿಖೆಗೆ ಅನುಮತಿಯನ್ನು ಪ್ರಶ್ನಿಸಿದ್ದರು. ಸಿಬಿಐ ತನಿಖೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ಹಾಗೂ ಆದಾಯ ಮೀರಿ ಆಸ್ತಿ ಗಳಿಕೆ ಅರ್ಜಿಯನ್ನು ಒಟ್ಟಿಗೆ ನಡೆಸಲು ಹೈಕೋರ್ಟ್ ನಿರ್ಧರಿಸಿದೆ.
ಶಾಸಕ ನೆಹರೂ ಓಲೇಕಾರ್ ಗೆ 2 ವರ್ಷ ಶಿಕ್ಷೆ ಹಿನ್ನೆಲೆ: ಅನರ್ಹಗೊಳ್ಳುವ ಭೀತಿಯಿಂದ ತಡೆಕೋರಿ ಹೈಕೋರ್ಜ್ ಗೆ ಅರ್ಜಿ
ಬೆಂಗಳೂರು: ನಕಲಿ ಬಿಲ್ ಪ್ರಕರಣದಲ್ಲಿ ಶಾಸಕ ನೆಹರೂ ಓಲೇಕಾರ್ ಅವರಿಗೆ 2 ವರ್ಷ ಶಿಕ್ಷೆಯನ್ನು ವಿಧಿಸಲಾಗಿತ್ತು. ಈ ಪ್ರಕರಣದಲ್ಲಿ ಈಗ ಚುನಾವಣೆ ಸಂದರ್ಭದಲ್ಲಿಯೇ ಅನರ್ಹತೆಗೊಳ್ಳುವ ಭೀತಿ ಎದುರಾಗಿದೆ. ಹೀಗಾಗಿ ಹೈಕೋರ್ಟ್ ಗೆ ದೋಷಿಯಾಗಿಸಿದ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಓಲೇಕಾರ್ ವಿರುದ್ಧ ನಕಲಿ ಬಿಲ್ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರಿಗೆ ಕೋರ್ಟ್ 2 ವರ್ಷ ಶಿಕ್ಷೆ ವಿಧಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಸುಪ್ರೀಂ ಕೋರ್ಟ್ ತೀರ್ಪಿನಂತೆ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ದೂರು ನೀಡಲಾಗಿತ್ತು.
ಈ ಪ್ರಕರಣದಲ್ಲಿ ದೋಷಿಯಾಗಿಸಿದ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಹೈಕೋರ್ಟ್ ಗೆ ಶಾಸಕ ನೆಹರೂ ಓಲೇಕಾರ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯ ನಡೆಸಿದಂತ ನ್ಯಾಯಮೂರ್ತಿ ಕೆ ನಟರಾಜನ್ ಅವರು, ಅವರನ್ನು ಇನ್ನೂ ಸ್ಪೀಕರ್ ಅನರ್ಹಗೊಳಿಸಿಲ್ಲವೇ? ಕೆಲವರಿಗೆ ತಕ್ಷಣ ಅನರ್ಹಗೊಳಿಸುತ್ತಾರೆ ಇವರನ್ನು ಏಕೆ ಮಾಡಿಲ್ಲ ಎಂದು ಲೋಕಾಯುಕ್ತ ಪರ ವಕೀಲರಿಗೆ ಪ್ರಶ್ನಿಸಿದರು.
ಸುಪ್ರೀಂ ಕೋರ್ಟ್ ತೀರ್ಪಿನಂತೆ ತನ್ನಿಂದ ತಾನೇ ಅನರ್ಹಗೊಳ್ಳುತ್ತಾರೆ. ಶಿಕ್ಷೆಗೆ ತಡೆಯಾಜ್ಞೆ ನೀಡದಂತೆ ಲೋಕಾಯುಕ್ತ ವಕೀಲರು ಹೈಕೋರ್ಟ್ ನ್ಯಾಯಪೀಠವನ್ನು ಮನವಿ ಮಾಡಿದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದಂತ ಹೈಕೋರ್ಟ್ ನ್ಯಾಯಪೀಠವು, ಆದೇಶವನ್ನು ಕಾಯ್ದಿರಿಸಿದೆ.