ಮೂರು ದಿನಗಳ ಕಾಲ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ನವದೆಹಲಿ : ಉತ್ತರ ಅಂಡಮಾನ್ ಸಮುದ್ರ ಮತ್ತು ಅದರ ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ, ಭಾರತೀಯ ಹವಾಮಾನ ಇಲಾಖೆಯು ಅಕ್ಟೋಬರ್ 18-21 ರ ಅವಧಿಯಲ್ಲಿ ಹಲವು ರಾಜ್ಯಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 18 ರಿಂದ 21 ರ ಅವಧಿಯಲ್ಲಿ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಲಕ್ಷದ್ವೀಪ ರಾಜ್ಯಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಪ್ರತ್ಯೇಕವಾದ ಮಳೆ ಮತ್ತು ಹಿಮಪಾತವನ್ನು ಮುನ್ಸೂಚನೆ ನೀಡಿದೆ. ಆದರೆ ವಾಯುವ್ಯ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಶುಷ್ಕ ಹವಾಮಾನ ಇರಲಿದೆ ಎಂದಿದೆ.
ಮುಂದಿನ 48 ಗಂಟೆಗಳಲ್ಲಿ ನೈಋತ್ಯ ಮಾನ್ಸೂನ್ ವಿದರ್ಭ, ಛತ್ತೀಸ್‌ಗಢ, ಆಂತರಿಕ ಮಹಾರಾಷ್ಟ್ರ, ಜಾರ್ಖಂಡ್, ಒಳಗಿನ ಒಡಿಶಾದ ಕೆಲವು ಭಾಗಗಳು ಮತ್ತು ಇಡೀ ಪಶ್ಚಿಮ ಬಂಗಾಳಲ್ಲಿ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಅಂಡಮಾನ್ ಸಮುದ್ರ ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆ ಇದೆ. ಇದರ ಪ್ರಭಾವದಿಂದ ಮುಂದಿನ 48 ಗಂಟೆಗಳಲ್ಲಿ ಆಗ್ನೇಯ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ಇದು ಪಶ್ಚಿಮ ಕೇಂದ್ರ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ತಿಳಿಸಿದೆ.
ಚಂಡಮಾರುತವಾಗಿ ಬದಲಾಗುವ ನಿರೀಕ್ಷೆಯಿದ್ದರೂ, ವ್ಯವಸ್ಥೆಯ ತೀವ್ರತೆ ಅಥವಾ ಮಾರ್ಗದ ಬಗ್ಗೆ ಯಾವುದೇ ಮುನ್ಸೂಚನೆಗಳನ್ನು ನೀಡಲಾಗುವುದಿಲ್ಲ. ಕಡಿಮೆ ಒತ್ತಡದ ಪ್ರದೇಶ ರಚನೆಯಾದ ನಂತರವೇ ನಾವು ಚಂಡಮಾರುತದ ಹೆಚ್ಚಿನ ವಿವರಗಳನ್ನು ನೀಡಬಹುದು ಎಂದು IMD ಯ ಮಹಾನಿರ್ದೇಶಕ ಮೃತುಂಜಯ್ ಹೇಳಿದ್ದಾರೆ.