ಮೂಲಭೂತ ಸೌಕರ್ಯ ಕಲ್ಪಿಸಿಲ್ಲವೆಂದು ಮತದಾನ ಬಹಿಷ್ಕರಿಸಲು ಮುಂದಾದ ಗ್ರಾಮಸ್ಥರು

ಮೂಲಭೂತ ಸೌಕರ್ಯ ಕಲ್ಪಿಸಿಲ್ಲವೆಂದು ಮತದಾನ ಬಹಿಷ್ಕರಿಸಲು ಮುಂದಾದ ಗ್ರಾಮಸ್ಥರು

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಇರುವುದರಿಂದ ಮತದಾನ ಬಹಿಷ್ಕಾರಿಸಲು ಸಾರ್ವಜನಿಕರು ಮುಂದಾಗಿದ್ದಾರೆ.

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿ ಹೊಸಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಸುಣ್ಣದಗೂಡಿನಲ್ಲಿ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗಿತ್ತು.

ಆದರೆ ಅವರಿಗೆ ಯಾವುದೇ ರೀತಿ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂದು ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ.ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಅತಿ ವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಾದ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಿದಿರುತಳ, ಮಧುಗುಂಡಿ, ದುರ್ಗದಹಳ್ಳಿಗಳ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

2019ರಲ್ಲಿ ಸುರಿದ ಧಾರಾಕಾರ ಮಳೆಗೆ ಗುಡ್ಡಗಳು ಕುಸಿದ ಪರಿಣಾಮ ಹಲವು ಮನೆಗಳು ಹಾನಿಗೊಳಲಾಗಿದ್ದವು. ಗ್ರಾಮಗಳು ಗುರುತು ಸಿಗದಂತೆ ಕೊಚ್ಚಿ ಹೋಗಿದ್ದವು. ಈ ಸಂಬಂಧ ಗ್ರಾಮಸ್ಥರು ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಯಾವುದೇ ಪ್ರಯೋಜನೆಗಳು ಆಗಿಲ್ಲ ಎಂದು ಆಕ್ರೋಶ ಹೊರಗೆ ಹಾಕಿದ್ದಾರೆ.