ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಿಲ್ದಾಣದ ಒಳಗೆ, ಮಾಲ್, ಶಾಪಿಂಗ್, ನಿರ್ಮಾಣಕ್ಕೆ ಪ್ಲ್ಯಾನ್

ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಇದೀಗ ಹೈಟೆಕ್ ಆಗುತ್ತಿದ್ದು, ಮೆಟ್ರೋ ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಬಿಎಂಆರ್‌ಸಿಎಲ್ ಪ್ಲ್ಯಾನ್ ಮಾಡಿದೆ. ಆದಾಯ ಸಂಗ್ರಹಣೆ ಭಾಗವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‍ನಲ್ಲಿ ಇನ್ನೂ 4 ಮಹಡಿಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.ಬೆಂಗಳೂರಿನ ಮೆಜೆಸ್ಟಿಕ್ ಸದಾ ಜನದಟ್ಟಣೆಯಿಂದ ಕೂಡಿರುವ ಪ್ರದೇಶ.
ನಮ್ಮ ಮೆಟ್ರೋ ಹೊರತುಪಡಿಸಿ ಕೆಎಸ್‍ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣ, ರೈಲು ನಿಲ್ದಾಣ ಸಹ ಇದೇ ಪ್ರದೇಶದಲ್ಲಿದೆ. ಇಲ್ಲಿ ವಾಣಿಜ್ಯ ಚಟುವಟಿಕೆ ಆರಂಭಿಸಿದರೆ ಅನುಕೂಲವಾಗಲಿದೆ ಎಂಬುದು ಬಿಎಂಆರ್‌ಸಿಎಲ್ ಲೆಕ್ಕಾಚಾರ. ಈ ಕಾರಣಕ್ಕಾಗಿಯೇ ಮೆಟ್ರೋ ನಿಲ್ದಾಣದಲ್ಲಿ ನಾಲ್ಕು ಮಹಡಿಗಳನ್ನು ನಿರ್ಮಾಣ ಮಾಡಿ ಶಾಪಿಂಗ್ ಮಾಲ್, ಥಿಯೇಟರ್, ಕಚೇರಿಗಳಿಗೆ ಬಾಡಿಗೆ ನೀಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.