ಮೇಕೆದಾಟು ಬಳಿಕ ಮಹದಾಯಿಗಾಗಿ ಹೋರಾಟ : ಸಿದ್ಧರಾಮಯ್ಯ

ಮೇಕೆದಾಟು ಬಳಿಕ ಮಹದಾಯಿಗಾಗಿ ಹೋರಾಟ : ಸಿದ್ಧರಾಮಯ್ಯ

ಹುಬ್ಬಳ್ಳಿ, ಜ.24- ಅರ್ಧಕ್ಕೆ ನಿಂತಿರುವ ಮೇಕೆದಾಟು ಪಾದಯಾತ್ರೆ ಪುನರಾರಂಭವಾಗಲಿದ್ದು, ಬಳಿಕ ಮುಂದಿನ ದಿನಗಳಲ್ಲಿ ಮಹದಾಯಿ, ಕೃಷ್ಣ ನದಿಗಳ ಯೋಜನೆ ಪೂರ್ಣಗೊಳಿಸಲು ಹಾಗೂ ಕಲ್ಯಾಣ ಕರ್ನಾಟಕದ 371 ಜೆ ಅಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಹೋರಾಟ ನಡೆಸುವುದಾಗಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಬಾದಾಮಿಗೆ ತೆರಳಲು ಆಗಮಿಸಿದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮಹದಾಯಿ ಪಾದಯಾತ್ರೆ ಬಗ್ಗೆ ಈಗಾಗಲೇ ಪಕ್ಷದಲ್ಲಿ ಚರ್ಚೆ ನಡೆದಿದೆ. ಕಾಂಗ್ರೆಸ್‌ಅಧಿಧಿಕಾರದಲ್ಲಿದ್ದಾಗ ಆಗಿನ ವಿರೋಧ ಪಕ್ಷದ ನಾಯಕ ಬಿ.ಎಸ್‍.ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಹೋರಾಟ ಮಾಡಿದ್ದರು.

ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಿಸುವ ಕಾಮಗಾರಿ ಆರಂಭಿಸುವುದಾಗಿ ರಕ್ತದಲ್ಲಿ ಬರೆದು ಕೊಡುತ್ತೆನೆಂದು ಭರವಸೆ ನೀಡಿದರು. ಅವರು ಮುಖ್ಯಮಂತ್ರಿಯಾಗಿದ್ದರು ಉತ್ತರ ಕರ್ನಾಟಕ ಭಾಗದ ಜನರಿಗೆ ನೀರು ಬಂತಾ ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮೇಕೆದಾಟು ಯೋಜನೆ ಶೀಘ್ರ ಆರಂಭಕ್ಕೆ ಒತ್ತಾಯಿಸಿ ನಡೆಸುತ್ತಿದ್ದ ಪಾದಯಾತ್ರೆಯನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ವೀಕೆಂಡ್ ಕರ್ಪ್ಯೂ ಜಾರಿಗೆ ತಂದಿತ್ತು. ಕೋವಿಡ್ಪತರಿಣಾಮ ಜಾರಿಗೆ ತರಲಾಗಿದ್ದ ಲಾಕ್ ಡೌನ್ ನಿಂದಗಳಿಂದ ಜರ್ಝರಿತವಾಗಿದ್ದ ಜನರ ಮೇಲೆ ಮತ್ತೊಮ್ಮೆ ವೀಕೆಂಡ್್ಡ ಲಾಕ್ ಡೌನ್ ಜನ್ಹೇದರುವ ಅಗತ್ಯ ಇರಲಿಲ್ಲ ಎಂದರು.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಲು ಕಾಂಗ್ರೆಸ್ನರ ಪಾದಯಾತ್ರೆ ಕಾರಣ ಅಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ, ಸಹಕಾರ ಸಚಿವ ಎಸ್‍.ಟಿ.ಸೋಮಶೇಖರ್‌ಅಂವರಿಗೆ ಕೋವಿಡ್ ದೃಢಪಟ್ಟಿತ್ತು. ಅದಕ್ಕೂ ನಮ್ಮ ಪಾದಯಾತ್ರೆ ಕಾರಣವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.