ಮೇಘಾಲಯ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಪಿಪಿಗೆ ಬೆಂಬಲ ಘೋಷಿಸಿದ ಬಿಜೆಪಿ

ಮೇಘಾಲಯ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಪಿಪಿಗೆ ಬೆಂಬಲ ಘೋಷಿಸಿದ ಬಿಜೆಪಿ

ಗುವಾಹಟಿ: ಮೇಘಾಲಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಆಶೀರ್ವಾದ ಕೋರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ.

ಮುಂದಿನ ಸರ್ಕಾರವನ್ನು ರಚಿಸಲು ಎನ್‌ಪಿಪಿಯನ್ನು ಬೆಂಬಲಿಸುವಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ಮೇಘಾಲಯ ರಾಜ್ಯ ಘಟಕಕ್ಕೆ ಸಲಹೆ ನೀಡಿದ್ದಾರೆ ಎಂದು ಶರ್ಮಾ ಹೇಳಿದರು. ಮತ ಎಣಿಕೆಗೆ ಒಂದು ದಿನ ಮುಂಚಿತವಾಗಿ ಕಾನ್ರಾಡ್ ಸಂಗ್ಮಾ ಮತ್ತು ಶರ್ಮಾ ಬುಧವಾರ ಗುವಾಹಟಿ ಹೋಟೆಲ್‌ನಲ್ಲಿ ಸಭೆ ನಡೆಸಿದ್ದರು. ಮೇಘಾಲಯದಲ್ಲಿ ಮುಂದಿನ ಸರ್ಕಾರ ರಚಿಸಲು ಬಿಜೆಪಿ ಮತ್ತು ಎನ್‌ಪಿಪಿ ಒಗ್ಗೂಡುತ್ತವೆ ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಮೇಘಾಲಯದ 60 ಸದಸ್ಯ ಬಲದ ವಿಧಾನಸಭೆಯಲ್ಲಿಎನ್‌ಪಿಪಿ 26 ಸ್ಥಾನಗಳನ್ನು ಪಡೆದರೆ, ಬಿಜೆಪಿ 3 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.