ಮೈಸೂರಲ್ಲಿʼ ಶ್ರೀಕಂಠೇಶ್ವರಸ್ವಾಮಿ ಜಾತ್ರಾ ಮಹೋತ್ಸವʼ : ಲಕ್ಷಾಂತರ ಭಕ್ತರ ಆಗಮನ

ಮೈಸೂರಲ್ಲಿʼ ಶ್ರೀಕಂಠೇಶ್ವರಸ್ವಾಮಿ ಜಾತ್ರಾ ಮಹೋತ್ಸವʼ : ಲಕ್ಷಾಂತರ ಭಕ್ತರ ಆಗಮನ

ಮೈಸೂರು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವ ಬೆಳಗ್ಗೆ 6.00ರಿಂದ 6.40ವರೆಗಿನ ಶುಭ ಮೀನ ಲಗ್ನದಲ್ಲಿ ನಡೆಯಲಿದೆ.

ಅಷ್ಟೇ ಅಲ್ಲದೇ ಏ.

2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾಗೌತಮ ರಥಾರೋಹಣ ನೆರವೇರಲಿದ್ದ, ಜಾತ್ರಮಹೋತ್ಸವಕ್ಕೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ. ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಮೆರವಣಿಗೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದರು.

ಜಾತ್ರೆಯ ಮತ್ತೊಂದು ಪ್ರಮುಖ ಆಕರ್ಷಣೆಯಾದ ತೆಪ್ಪೋತ್ಸವ ಏ. 4ರಂದು ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ನಡೆಯಲಿದ್ದು, ತೆಪ್ಪೋತ್ಸವದಲ್ಲೂ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಯಿದೆ.

ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿಜರುಗುವ ದೊಡ್ಡಜಾತ್ರೆಯ ರಥೋತ್ಸವದಲ್ಲಿ ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಅವರು ಆಸೀನರಾಗಿರುವ 5 ಅಲಂಕೃತ ರಥಗಳು ಮೆರವಣಿಗೆಯಲ್ಲಿ ಸಾಗುತ್ತವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ಶ್ರೀಕಂಠೇಶ್ವರಸ್ವಾಮಿ ಆಸೀನರಾಗುವ ಗೌತಮ ರಥ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಸುಮಾರು 10 ಅಡಿ ವ್ಯಾಸದ ಆರು ಬೃಹತ್‌ ಚಕ್ರಗಳನ್ನು ಒಳಗೊಂಡಿದೆ.

ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸುವ ಜೊತೆಗೆ ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನ ಸಂದಣಿ ಇರುವ ನದಿ ತೀರ, ದೇವಾಲಯದ ಆವರಣ, ದಾಸೋಹ ಭವನ ಇನ್ನಿತರ ಪ್ರದೇಶಗಳಲ್ಲಿ ಕಳ್ಳತನ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳು ಜರುಗದಂತೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ದೇವಾಲಯದ ಸುತ್ತಮುತ್ತ ಪೊಲೀಸರು ಹದ್ದಿನ ಕಣ್ಣು ಇಡಲಿದ್ದಾರೆ