ಮೈಸೂರಿಗರಿಗೆ ಸಿಹಿ ಸುದ್ದಿ : ನಗರಕ್ಕೆ ಬರಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು!

ನವದೆಹಲಿ: ದಕ್ಷಿಣ ಭಾರತದಲ್ಲೂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಚೆನ್ನೈ, ಬೆಂಗಳೂರು ಹಾಗೂ ಮೈಸೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರವೇ ಆರಂಭವಾಗಲಿದೆ.
ಇತೀಚಿಗಷ್ಟೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಹಿಮಾಚಲ ಪ್ರದೇಶದ ಉನಾ ಹಾಗೂ ದೆಹಲಿ ಮಧ್ಯೆ ಈ ರೈಲಿಗೆ ಹಸಿರು ನಿಶಾನೆಯನ್ನು ಮೋದಿ ತೋರಿಸಿದ್ದರು. ಇನ್ನು, ಈಗಾಗಲೇ ಗುಜರಾತ್ನ ಗಾಂಧಿ ನಗರ ಮತ್ತು ಮಹಾರಾಷ್ಟ್ರದ ಮುಂಬೈ ಹಾಗೂ ವಾರಾಣಸಿ ಹಾಗೂ ದೆಹಲಿ ನಡುವೆ ಸೆಮಿ ಹೈಸ್ಪೀಡ್ ರೈಲು ಸಂಚರಿಸುತ್ತಿದೆ.