ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ : ಅರಣ್ಯ ಸಿಬ್ಬಂದಿ, ಪೊಲೀಸರು ದೌಡು

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ : ಅರಣ್ಯ ಸಿಬ್ಬಂದಿ, ಪೊಲೀಸರು ದೌಡು

ಮೈಸೂರು : ಬೇಸಿಗೆಯ ಬಿರು ಬಿಸಿಲಿನ ತಾಪಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ಕುರುಚಲು ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ.ಬೇಸಿಲಿನ ತಾಪಮಾನಕ್ಕೆ ಕಾಡ್ಗಿಚ್ಚಿನಿಂದ ಬೆಂಕಿ ಹಬ್ಬಿರುವ ಶಂಕೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಘಟನಾಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಯಾವುದೇ ಪ್ರಾಣಪಾಯವಾಗಿಲ್ಲ, ಕೂಡಲೇ ಮುನ್ನೆಚ್ಚರಿಕೆ ಕೈಗೊಂಡಕಾರಣದಿಂದಾಗಿ ಬೆಂಕಿ ಅವಘಡ ಕಡಿಮೆಯಾಗಿದೆ. ಇದೀಗ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರೋದ್ರಂದ ಹಲವೆ ಈ ರೀತಿ ಘಟನೆಯೂ ಬೆಳಕಿಗೆ ಬರುತ್ತಿದೆ. ಇತ್ತೀಚಿಗೆ ಬಂಡಿಪುರ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ ಹತ್ತಿದ್ದು , ಹತ್ತಾರು ಎಕರೆ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾರೆ. ದಟ್ಟ ಹೊಗೆ ಅವರಿಸಿಕೊಂಡಿತ್ತು.