ಮೈಸೂರಿನಲ್ಲಿ ಕೂಲಿ ಕಾರ್ಮಿಕನ ಮೇಲೆ ಹುಲಿ ದಾಳಿ: ಗಂಭೀರ ಗಾಯ, ಆಸ್ಪತ್ರೆಗೆಮೈಸೂರಿನಲ್ಲಿ ಕೂಲಿ ಕಾರ್ಮಿಕನ ಮೇಲೆ ಹುಲಿ ದಾಳಿ: ಗಂಭೀರ ಗಾಯ, ಆಸ್ಪತ್ರೆಗೆ

ಮೈಸೂರಿನಲ್ಲಿ ಕೂಲಿ ಕಾರ್ಮಿಕನ ಮೇಲೆ ಹುಲಿ ದಾಳಿ: ಗಂಭೀರ ಗಾಯ, ಆಸ್ಪತ್ರೆಗೆಮೈಸೂರಿನಲ್ಲಿ ಕೂಲಿ ಕಾರ್ಮಿಕನ ಮೇಲೆ ಹುಲಿ ದಾಳಿ: ಗಂಭೀರ ಗಾಯ, ಆಸ್ಪತ್ರೆಗೆ

ಮೈಸೂರು: ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಮೇಟಿಕುಪ್ಪೆ ಬಳಿ ಕೂಲಿ ಕಾರ್ಮಿಕನ ಮೇಲೆ ಹುಲಿ ದಾಳಿ ನಡೆಸಿದೆ.

ಈ ಪರಿಣಾಮ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 27ವರ್ಷದ ಮುನೇಶ್ವರ ಎಂಬಾತನ ಮೇಲೆ ಹುಲಿ ದಾಳಿ ನಡೆಸಿದೆ.

ಜಮೀನಿನಲ್ಲಿ ಕೂಲಿ ಕೆಲಸಕ್ಕೆ ಮೂವರು ಕಾರ್ಮಿಕರು ಬಂದಿದ್ದರು.ಬಾಳೆಗೊನೆ ಕತ್ತರಿಸುವಾಗ ಪೊದೆಯಲ್ಲಿದ್ದ ಹುಲಿ ಸಡನ್​ ಆಗಿ ದಾಳಿ ಮಾಡಿದೆ. ಇದರಿಂದ ಹೆದರಿ ಕೂಲಿ ಕಾರ್ಮಿಕರು ಕೂಗಾಡುತ್ತಿದ್ದಂತೆ ಹುಲಿ ಓಡಿ ಹೋಗಿದೆ. ಈ ವೇಳೆ ಮುನೇಶ್ವರ ಬಲಗೈ ಬೆರಳಿಗೆ ಗಾಯವಾಗಿದ್ದು, ಹೆಚ್​​.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಈ ಘಟನಾ ಸಂಬಂಧ ಹೆಚ್. ಡಿ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.