ಮೈಸೂರಿನಲ್ಲಿ ಮತದಾರರ ಪಟ್ಟಿಯಿಂದ 1.20 ಲಕ್ಷ ಹೆಸರುಗಳನ್ನು ಕೈಬಿಟ್ಟ ಜಿಲ್ಲಾಡಳಿತ
ಮೈಸೂರು: ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಆರೋಪ ಕುರಿತು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಪತ್ರಿಕಾ ಪ್ರಕಟಣೆ ಮೂಲಕ ದಾಖಲೆ ಸಮೇತ ಸ್ಪಷ್ಟನೆ ನೀಡಿದ್ದಾರೆ.
'ಮೈಸೂರು ಜಿಲ್ಲೆಯಲ್ಲಿ ಲಕ್ಷಾಂತರ ಮತದಾರರನ್ನು ಅಕ್ರಮವಾಗಿ ಕೈಬಿಡಲಾಗಿದೆ' ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆರೋಪ ಮಾಡಿದ್ದರು. ಈ ಬಗ್ಗೆ ದಾಖಲೆಗಳ ಸಮೇತ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ, ಒಟ್ಟು 1.20 ಲಕ್ಷ ಮತದಾರರ ಹೆಸರುಗಳನ್ನು ಕಾನೂನಾತ್ಮಕವಾಗಿಯೇ ಕೈ ಬಿಡಲಾಗಿದೆ. ಈ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆದು ಮಾಹಿತಿಯನ್ನೂ ನೀಡಲಾಗಿದೆ ಎಂದು ಹೇಳಿದ್ದಾರೆ.