ಮೈಸೂರಿನಲ್ಲಿ ವಾಸವಿದ್ದ ಶಂಕಿತ ಉಗ್ರ ಶಾರಿಕ್: ಬಾಡಿಗೆ ಮನೆ ಪಡೆಯಲು ಹೊಸ ರೂಲ್ಸ್ ಜಾರಿ

ಮೈಸೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕಿತ ಉಗ್ರ ಶಾರಿಕ್ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿದ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಶಂಕಿತ ಉಗ್ರ ಶಾರಿಕ್, ನಕಲಿ ದಾಖಲೆ ನೀಡಿ ಮನೆ ಬಾಡಿಗೆ ಪಡೆದಿದ್ದ. ಮನೆ ಬಾಡಿಗೆ ನೀಡುವ ಮುನ್ನ ವ್ಯಕ್ತಿಯ ಪೂರ್ವಾಪರ ತಿಳಿಯಬೇಕು. ಬಾಡಿಗೆದಾರರು ನೀಡುವ ದಾಖಲೆ ಸಂಪೂರ್ಣ ಪರಿಶೀಲಿಸಬೇಕು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ನೀಡಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮೈಸೂರಿನಲ್ಲಿ ತಲೆ ಮರೆಸಿಕೊಂಡಿದ್ದ ಶಂಕಿತ ಉಗ್ರ ಶಾರಿಕ್, ನಕಲಿ ದಾಖಲೆ ನೀಡಿ ಮನೆ ಪಡೆದಿದ್ದ ಎಂದು ಹೇಳಿದ ರಮೇಶ್ ಬಾನೋತ್, ನಗರದಲ್ಲಿ ಮನೆ ಬಾಡಿಗೆ ಪಡೆಯುವ ವಿಚಾರವಾಗಿ ಮೈಸೂರು ಪೊಲೀಸರು ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸಲಿದ್ದಾರೆ ಎಂದರು. ನಗರದಲ್ಲಿ ಬಾಡಿಗೆಗಾಗಿ ಮನೆ ಕೇಳಿಕೊಂಡು ಬಂದಾಗ ಅಂತಹ ವ್ಯಕ್ತಿಗಳ ಪೂರ್ವಾಪರ ತಿಳಿದುಕೊಳ್ಳಬೇಕು. ಅವರು ನೀಡುವ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಬೇಕು. ಇದರ ಜೊತೆಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.