ಮೈಸೂರು : ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ : ಆಸ್ಪತ್ರೆಗೆ ದಾಖಲು

ಮೈಸೂರು : ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ : ಆಸ್ಪತ್ರೆಗೆ ದಾಖಲು

ಮೈಸೂರು : ಮೈಸೂರಿನಲ್ಲಿ ಚಿರತೆ ಆತಂಕದ ಬಳಿಕ ಹುಲಿ ಆತಂಕ ಸೃಷ್ಟಿಯಾಗಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮೇಟಿಕುಪ್ಪೆ ಬಳಿ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಹುಲಿ ದಾಳಿ ನಡೆಸಿದೆ. ಕೂಡಲೇ ಅಲ್ಲಿದ್ದವರು ಕೂಗಾಡಿದ್ದಾರೆ. ಇದರಿಂದ ಹೆದರಿದ ಹುಲಿ ಓಡಿ ಹೋಗಿದೆ. ಈ ವೇಳೆ ಮುನೇಶ್ವರ ಎಂಬಾತನ ಬಲಗೈ ಬೆರಳಿಗೆ ಗಾಯವಾಗಿದ್ದುಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್. ಡಿ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ