ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರ: ಮುಗಿದ ಅಸಿಂಧು ಮತ ಬೇರ್ಪಡೆ ಪ್ರಕ್ರಿಯೆ
ಮೈಸೂರು: ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಅಸಿಂಧು ಮತಗಳನ್ನು ಬದಿಗಿರಿಸುವ ಪ್ರಕ್ರಿಯೆ ಮುಗಿದಿದ್ದು, ಕೆಲವೇ ನಿಮಿಷಗಳಲ್ಲಿ ಮತ ಎಣಿಕೆ ಅಧಿಕೃತವಾಗಿ ಆರಂಭವಾಗಲಿದೆ.
ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 500 ಮತಗಳು ತಿರಸ್ಕೃತಗೊಂಡಿವೆ.
ಕಾಂಗ್ರೆಸ್ ಪಕ್ಷದ ಡಾ.ಡಿ.ತಿಮ್ಮಯ್ಯ, ಬಿಜೆಪಿಯ ಆರ್.ರಘು (ಕೌಟಿಲ್ಯ), ಜೆಡಿಎಸ್ ಪಕ್ಷದ ಸಿ.ಎನ್.ಮಂಜೇಗೌಡ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಮೂವರೂ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಸೇರಿದಂತೆ ಏಳು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಅಸಿಂಧು ಮತಗಳನ್ನು ಬೇರ್ಪಡಿಸುವ ವೇಳೆ ಕಾಂಗ್ರೆಸ್‌ಗೆ ಮೊದಲ ಪ್ರಾಶಸ್ತ್ಯ ಮತಗಳು ಹೆಚ್ಚು ಇರುವುದು ಗೊತ್ತಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ಆದರೆ, ಮತ ಎಣಿಕೆ ಇನ್ನೂ ಅಧಿಕೃತವಾಗಿ ಆರಂಭವಾಗಿಲ್ಲ