ಮೈಸೂರು: ವೇಶ್ಯಾವಾಟಿಕೆ ವಿರುದ್ಧ ಮಹಿಳೆ ಏಕಾಂಗಿ ಪ್ರತಿಭಟನೆ

ಮೈಸೂರು: ವೇಶ್ಯಾವಾಟಿಕೆ ವಿರುದ್ಧ ಮಹಿಳೆ ಏಕಾಂಗಿ ಪ್ರತಿಭಟನೆ

ಮೈಸೂರು: ವರುಣ ಠಾಣಾ ವ್ಯಾಪ್ತಿಯಲ್ಲಿ ಗಂಡ-ಹೆಂಡತಿ ಇಬ್ಬರೂ ಸೇರಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಕಳೆದ ವರ್ಷವೇ ವರುಣ ಠಾಣೆಗೆ ದೂರು ನೀಡಿದ್ದೆ. ಆದರೂ. ಪೊಲೀಸರು ಯಾವುದೇ ಕ್ರಮವನ್ನು ಜರುಗಿಸಿಲ್ಲ ಎಂದು ಎಂ.ಚೌಡಯ್ಯ ಅವರ ಸಾಮಾಜಿಕ, ಶೈಕ್ಷಣಿಕ ಚಾರಿಟಬಲ್ ಇಂಟರ್ ನ್ಯಾಷಿನಲ್ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷೆ ಸರ್ವಮಂಗಳ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ನಗರದ ಕೋರ್ಟ್ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ ಅವರು ಕೇಂದ್ರ, ರಾಜ್ಯ ಸರ್ಕಾರಗಳ ಮತ್ತು ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವರುಣ ಠಾಣಾ ವ್ಯಾಪ್ತಿಯಲ್ಲಿ ಗಂಡ-ಹೆಂಡತಿ ಇಬ್ಬರೂ ಸೇರಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಕಳೆದ ವರ್ಷವೇ ವರುಣ ಠಾಣಾಗೆ ದೂರು ನೀಡಿದ್ದೆ. ಆದರೆ, ಯಾವುದೇ ಕ್ರಮವನ್ನು ಪೊಲೀಸರು ಕೈಗೊಂಡಿಲ್ಲ.

ಈ ಸಂಬಂಧ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮತ್ತು ಬೆಂಗಳೂರಿನಲ್ಲಿಯೂ ಸುದ್ದಿಗೋಷ್ಠಿ ಮಾಡಿದ್ದೇನೆ. ಆದರೂ, ಕ್ರಮ ಜರುಗಿಸಿಲ್ಲ. ಯುವಕ-ಯುವತಿಯ ಖಾಸಗಿ ವಿಡಿಯೋಗಳನ್ನು ಕೆಲವು ಪೊಲೀಸರು ಸಿಡಿ ಮಾಡಿಕೊಂಡಿದ್ದಾರೆ ಎಂದು ದೂರಿದರು. ಕೂಡಲೇ ತನಿಖೆ ಕೈಗೊಂಡು ವೇಶ್ಯಾವಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.