ಮೊಣಕಾಲು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ʻಹೆಚ್.ಡಿ ದೇವೇಗೌಡʼ ಡಿಸ್ಚಾರ್ಜ್

ಬೆಂಗಳೂರು: ಮೊಣಕಾಲು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೆಲವು ದಿನಗಳ ಹಿಂದೆ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಇನ್ನು, ಮುಂದಿನ ದಿನಗಳಲ್ಲಿ ನಡೆಯುವ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.