ಮೊದಲ ಟೆಸ್ಟ್‌ನಿಂದ ರೋಹಿತ್ ಹೊರಕ್ಕೆ; ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್

ಭಾರತ & ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿ.14 ರಿಂದ ಆರಂಭವಾಗಲಿದೆ. ಈ ಪಂದ್ಯದಿಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿಯಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಕನ್ನಡಿಗ ಕೆ.ಎಲ್ ರಾಹುಲ್ ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ 2ನೇ ಏಕದಿನ ಪಂದ್ಯದ ವೇಳೆ ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಇದೀಗ ಗಾಯದಿಂದ ಚೇತರಿಕೆ ಕಾಣದ ಹಿನ್ನೆಲೆ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.