ಮೊದಲ ದಿನದ ಬಜೆಟ್ ಅಧಿವೇಶನಕ್ಕೆ ಹಲವು ವಿಪಕ್ಷ ನಾಯಕರ ಗೈರು

ಬೆಂಗಳೂರು: ವಿಧಾನಸೌಧದಲ್ಲಿ ನಡೆಯುತ್ತಿರುವ ರಾಜ್ಯ ಬಜೆಟ್ ಅಧಿವೇಶನದ ರಾಜ್ಯಪಾಲರ ಭಾಷಣಕ್ಕೆ ವಿಪಕ್ಷದ ಹಲವು ನಾಯಕರು ಗೈರಾಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಗೈರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ.ಗೋವುಗಳ ರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. 1000 ಗೋ ಶಾಲೆಗಳಗಳನ್ನು ನಿರ್ಮಿಸಲಾಗಿದೆ ಗೋವುಗಳ ಪೋಷಣೆಗಾಗಿ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತರಲಾಗಿದೆ.. ಈ ಮೂಲಕ ದೇಶದಲ್ಲಿ ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.