ಮೋದಿ ಪ್ರಧಾನಿ ಆಗಿದ್ದಕ್ಕೆ ನನಗೆ ಪದ್ಮಭೂಷಣ ಪ್ರಶಸ್ತಿ ಬಂತು : ಸಾಹಿತಿ ಎಸ್.ಎಲ್.ಭೈರಪ್ಪ

ಮೈಸೂರು : 2024ರಿಂದ 2029ರವರೆಗೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿರಲಿ, ಮೋದಿ ಅವರು ಪ್ರಧಾನಿ ಆಗಿದ್ದಕ್ಕೆ ನನಗೆ ಪದ್ಮಭೂಷಣ ಪ್ರಶಸ್ತಿ ಬಂತು ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರಲ್ಲೇ ನಾನು ಒಂದು ಲೇಖನ ಬರೆದಿದ್ದೆ.
ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನ ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ನನಗೆ ಸಂತೋಷ ಎಂದು ತಿಳಿಸಿದ್ದಾರೆ.