ಮೋದಿ ಹಟಾವೋ, ದೇಶ್ ಬಚಾವೋʼ ಪೋಸ್ಟರ್‌ ಹಾಕಿದ್ದಕ್ಕಾಗಿ ಗುಜರಾತ್‌ನಲ್ಲಿ 8 ಮಂದಿ ಅರೆಸ್ಟ್

ಮೋದಿ ಹಟಾವೋ, ದೇಶ್ ಬಚಾವೋʼ ಪೋಸ್ಟರ್‌ ಹಾಕಿದ್ದಕ್ಕಾಗಿ ಗುಜರಾತ್‌ನಲ್ಲಿ 8 ಮಂದಿ ಅರೆಸ್ಟ್

ವದೆಹಲಿ: ಅಹಮದಾಬಾದ್‌ನ ವಿವಿಧ ಪ್ರದೇಶಗಳಲ್ಲಿ 'ಮೋದಿ ಹಟಾವೋ, ದೇಶ್ ಬಚಾವೋ' ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದ ಕೇವಲ ಒಂದು ದಿನದ ನಂತರ ಈ ಬಂಧನ ನಡೆದಿವೆ.

ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಹಮದಾಬಾದ್ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.