ಮೋದಿ ನಿರ್ಧಾರವನ್ನು ಸ್ವಾಗತಿಸಿದ ದೇವೇಗೌಡ: ಇದು ರೈತರ ವಿಜಯ ಎಂದ ಮಮತಾ ಬ್ಯಾನರ್ಜಿ

ಬೆಂಗಳೂರು: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ಮಾಜಿ ಪ್ರಧಾನಿ ದೇವೇಗೌಡ ಸ್ವಾಗತಿಸಿದ್ದಾರೆ.
ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ.
ಸಂಸದೀಯ ವ್ಯವಸ್ಥೆಯಲ್ಲಿ ವಾದ ಮಂಡನೆ ಮತ್ತು ಚರ್ಚೆಗಳು ಅತ್ಯಂತ ಪ್ರಮುಖ. ಸೆಪ್ಟೆಂಬರ್ 2020ರಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಾಜ್ಯಸಭೆಯಲ್ಲಿ ನಾನು ಮಾಡಿದ ಭಾಷಣದ ವಿವರ ಇಲ್ಲಿದೆ ಎಂದು ಹೇಳಿಕೆಯ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಯಾವುದೇ ಒತ್ತಡಕ್ಕೂ ಮಣಿಯದೇ ಹೋರಾಟ ನಡೆಸಿದ ಪ್ರತಿಯೊಬ್ಬ ರೈತರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿದ್ದೀರಿ. ಇದು ನಿಮ್ಮ ವಿಜಯವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.