FACT CHECK: ಮೋದಿ ಸರಕಾರದಿಂದ ಲ್ಯಾಪ್‌ಟಾಪ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆಯೇ
ಹೊಸದಿಲ್ಲಿ:ಒಂದಲ್ಲ ಒಂದು ಸರಕಾರಿ ಯೋಜನೆಗಳ ಹೆಸರಿನಲ್ಲಿ ಹಲವು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಇತ್ತೀಚಿನ ದಿನಗಳಲ್ಲಿ ಅಂತಹ ಒಂದು ಸರ್ಕಾರಿ ಯೋಜನೆಯ ಸಂದೇಶವನ್ನು ಪ್ರಸಾರ ಮಾಡಲಾಗುತ್ತಿದೆ. ನರೇಂದ್ರ ಮೋದಿ ಸರಕಾರ ಯುವಕರಿಗೆ ಉಚಿತ ಲ್ಯಾಪ್ ಟಾಪ್ ನೀಡುವುದಾಗಿ ಘೋಷಣೆ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಈ ಸಂದೇಶ ಹರಿದಾಡುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಸಂದೇಶದಲ್ಲಿ, ಮೋದಿ ಸರ್ಕಾರದಿಂದ ಲ್ಯಾಪ್‌ಟಾಪ್‌ಗಳನ್ನು ಸಂಪೂರ್ಣವಾಗಿ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಹೇಳಲಾಗಿದೆ. ಪ್ರಧಾನ ಮಂತ್ರಿ ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆಗೆ ಮುಂಚಿತವಾಗಿ ನೋಂದಾಯಿಸಿ. ಇದರೊಂದಿಗೆ, ಈ ಸಂದೇಶದಲ್ಲಿ ಲಿಂಕ್ ಒಂದನ್ನು ನೀಡಲಾಗಿದೆ. ಇದೀಗ ಸರ್ಕಾರಿ ಸಂಸ್ಥೆ ಪಿಐಬಿ ಈ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.
ಪ್ರಧಾನಿಯವರ ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆಯಡಿ ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ ಎಂದು ನಕಲಿ WhatsApp ಸಂದೇಶದಲ್ಲಿ ಹೇಳಲಾಗುತ್ತಿದೆ ಎಂದು PIB ಟ್ವೀಟ್ ಮಾಡಿದೆ. PIBFactCheck ಇಂತಹ ನಕಲಿ ಸಂದೇಶಗಳ ಬಗ್ಗೆ ಎಚ್ಚರದಿಂದಿರಿ. ಇವುಗಳನ್ನು ಫಾರ್ವರ್ಡ್ ಮಾಡಬೇಡಿ/ಹಂಚಿಕೊಳ್ಳಬೇಡಿ. ಅಂತಹ ಲಿಂಕ್‌ಗಳು ಮತ್ತು ವೆಬ್‌ಸೈಟ್‌ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಸಹ ಹಂಚಿಕೊಳ್ಳಬೇಡಿ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಸಂದೇಶದಲ್ಲಿ, ಮೋದಿ ಸರ್ಕಾರದಿಂದ ಲ್ಯಾಪ್‌ಟಾಪ್‌ಗಳನ್ನು ಸಂಪೂರ್ಣವಾಗಿ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಹೇಳಲಾಗಿದೆ.ಇಂತಹ ನಕಲಿ ಸಂದೇಶಗಳ ಬಗ್ಗೆ ಎಚ್ಚರದಿಂದಿರಿ. ಇವುಗಳನ್ನು ಫಾರ್ವರ್ಡ್ ಮಾಡಬೇಡಿ/ಹಂಚಿಕೊಳ್ಳಬೇಡಿ. ಅಂತಹ ಲಿಂಕ್‌ಗಳು ಮತ್ತು ವೆಬ್‌ಸೈಟ್‌ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಸಹ ಹಂಚಿಕೊಳ್ಳಬೇಡಿ.