ಮೋರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ TMC ವಕ್ತಾರ ಅರೆಸ್ಟ್

ಮೋರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ TMC ವಕ್ತಾರ ಅರೆಸ್ಟ್

ಗುಜರಾತಿನ ಮೋರ್ಬಿ ಸೇತುವೆ ದುರಂತದ ಕುರಿತು ಟ್ವೀಟ್ ಮಾಡಿದ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನ ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಸಾಕೇತ್ ಗೋಖಲೆ ಅವರು ನಿನ್ನೆ ರಾತ್ರಿ ದೆಹಲಿಯಿಂದ ರಾಜಸ್ಥಾನದ ಜೈಪುರಕ್ಕೆ ವಿಮಾನದಲ್ಲಿ ತೆರಳಿದ್ದರು. ಅಲ್ಲಿಂದ ಗುಜರಾತ್ ಪೊಲೀಸರ್ ಬಂಧಿಸಿ ಕರೆದೊಯ್ದಿದ್ದಾರೆ ಎಂದು ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ. ಸದ್ಯ ಈ ಬಗ್ಗೆ ಬಿಜೆಪಿಯಾಗಲಿ ಅಥವಾ ಗುಜರಾತ್ ಸರ್ಕಾರವಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.