ಮೌಲ್ಯಾಂಕನ'ದ ಮಾದರಿ ಪ್ರಶ್ನೆ ಪತ್ರಿಕೆ' : 5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ
ಬೆಂಗಳೂರು : 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. 'ಮೌಲ್ಯಾಂಕನ'ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು 'KSEAB' ವೆಬ್ ಸೈಟ್ ನಲ್ಲಿ ಬಿಡುಗಡೆಗೊಳಿಸಲಾಗಿದೆ.
5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ 'ಮೌಲ್ಯಾಂಕನ'ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು 'ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ' ( KSEAB) ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಪ್ರಶ್ನೆ ಪತ್ರಿಕೆ ವೀಕ್ಷಿಸಬಹುದಾಗಿದೆ.
5, 8 ತರಗತಿ ವಿದ್ಯಾರ್ಥಿ ಗಳಿಗೆ ಮಾ.9ರಿಂದ 17ರವರೆಗೆ ನಡೆಯಲಿರುವ 'ಮೌಲ್ಯಾಂಕನ ಪರೀಕ್ಷೆ'ಗೆ ಸಂಬಂಧಿಸಿದಂತೆ 'ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ' ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಿದೆ. ಮಾದರಿ ಪ್ರಶ್ನೆಗಳು ಮಂಡಳಿಯ ವೆಬ್‌ಸೈಟ್ https:// kseab.karnataka.gov.in ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.