ಯಾತ್ರೆ ನಿಲ್ಲಿಸಲು ನೆಪ: ಕೇಂದ್ರದ 'ಕೋವಿಡ್ ಎಚ್ಚರಿಕೆ' ಪತ್ರಕ್ಕೆ ರಾಹುಲ್ ಗಾಂಧಿ ಕಿಡಿ

ಕೋವಿಡ್ 19 ಏರಿಕೆ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಮೊಟಕುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಪತ್ರ ಬರೆದಿರುವುದರ ವಿರುದ್ಧ ಕಾಂಗ್ರೆಸ್ ಮುಗಿಬಿದ್ದಿದೆ. ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸದೆ ಇದ್ದರೆ ಯಾತ್ರೆಯನ್ನು ಸ್ಥಗಿತಗೊಳಿಸಿ ಎಂದು ಕೇಂದ್ರ ಸರ್ಕಾರ ಹೇಳಿರುವುದು ಒಂದು ನೆಪ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಭಾರತ್ ಜೋಡೋ ಯಾತ್ರೆಗೆ ಅಡ್ಡಿಪಡಿಸಲು ನಡೆಸಿರುವ ಸಂಚು ಎಂದು ದೂರಿದ್ದಾರೆ.