ಯಾದಗಿರಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ ಟಾವಲ್, 315 ಲೀಟರ್ ಮದ್ಯ ಪೊಲೀಸರ ವಶಕ್ಕೆ
ಯಾದಗಿರಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ಚುನಾವಣೆ ಪ್ರಚಾರದ ಕಾವು ರಂಗೇರಿದೆ. ಈಗಾಗಲೇ ಮೂರು ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ.
ಕೇಂದ್ರ ಚುನಾವಣಾ ಆಯೋಗವು ಇಂದು ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಇಂದೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.
ಇದೀಗ ಯಾದಗಿರಿ ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ ಟಾವಲ್ಗಳನ್ನ ಗುರುಮಠಕಲ್ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ತೆಲಂಗಾಣದಿಂದ ಯಾದಗಿರಿ ಕಡೆ ಕಾರಿನಲ್ಲಿ ಸಾಗಿಸುತ್ತಿದ್ದಾಗ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 10 ಲಕ್ಷ ರೂ. ಮೌಲ್ಯದ ಟಾವಲ್ ಪತ್ತೆಯಾಗಿದ್ದು, ರವಿ ಎಂಬಾತನ್ನು ವಶಕ್ಕೆ ಪಡೆದಿದ್ದಾರೆ. ಇದರ ಜೊತೆಗೆ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 315 ಲೀಟರ್ ಮದ್ಯವನ್ನ ವಶಕ್ಕೆ ಪಡೆದು, ಆನಂದ ಸೇರಿ ನಾಲ್ಕು ಜನರನ್ನ ಬಂಧಿಸಲಾಗಿದೆ. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಬೆಂಗಳೂರು ಗ್ರಾಮಾಂತರ : ಮುಂದಿನ ವಿಧಾನ ಸಭಾ ಚುನಾವಣೆಗೆ ಮತದಾರರ ಸೆಳೆಯೋದಕ್ಕೆ ರಾಜ್ಯದೆಲ್ಲೆಡೆ ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಗಿಫ್ಟ್ ಪಾಲಿಟಿಕ್ಸ್ ಎಲ್ಲೆಡೆ ನಡೆಸುತ್ತಿರೋದು ಪತ್ತೆಯಾಗುತ್ತಿದೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗಾಗಿ ಕಟ್ಟೆಚ್ಚರ ವಹಿಸಲಾಗುತ್ತಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ. ನಗದು, ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ 48 ಕೆ.ಜಿ. ಬೆಳ್ಳಿ, ವಿವಿಧ ಉಡುಪು, ಬಟ್ಟೆಗಳು ಸೇರಿ ಸುಮಾರು 42,83,320 ರೂ. ಮೌಲ್ಯದ ವಸ್ತುಗಳನ್ನು ಸಾಗಿಸುತ್ತಿರೋ ಪತ್ತೆಯಾಗಿದೆ.