ಯಾದಗಿರಿಯಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ

ಯಾದಗಿರಿ : ಕಾಲುವೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣಕ್ಕೀಡಾದ ಘಟನೆ ಹುಣಸಗಿ ತಾಲೂಕಿನ ರಾಜನಕೂಳೂರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಲ್ಲಿಕಾರ್ಜುನ(35) ಪರಶುರಾಮ್ (32) ಎಂದು ಗುರುತಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಾಮನಟಗಿಯಿಂದ ನಾರಾಯಣಪುರಕ್ಕೆ ತೆರಳುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ. ಕೊಡೆಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.