ಯಾರದ್ದು ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್: ಸತೀಶ್ ಜಾರಕಿಹೊಳಿ

ಯಾರದ್ದು ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್: ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ

ಬೆಳಗಾವಿ: ಒಂದು ವಾರ ಅಥವಾ ಮಾರ್ಚ್ ತಿಂಗಳ ಮೊದಲನೆ ವಾರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದ್ದು, ಯಾರದ್ದು ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ರವಿವಾರ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸೋಣ. ಟಿಕೆಟ್ ಘೋಷಣೆ ಆಗದೇ ಇರುವುದರಿಂದ ಭಿನ್ನಮತ ಸಹಜ. ಟಿಕೆಟ್ ಘೋಷಣೆ ಬಳಿಕ ಎಲ್ಲವೂ ತಣ್ಣಗಾಗಲಿದೆ ಎಂದು ಹೇಳಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿ 8 ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ. ಹೀಗಾಗಿಯೇ ಕೆಲವರು ನಾನೇ ಕಾಂಗ್ರೆಸ್ ಅಭ್ಯರ್ಥಿ, ಆಕಾಂಕ್ಷಿ ಎನ್ನುತ್ತಿದ್ದಾರೆ. ಆದುದರಿಂದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಎಲ್ಲವನ್ನು ಖುದ್ದು ಪರಿಶೀಲಿಸಲು ಜಿಲ್ಲೆಗೆ ಆಗಮಿಸಿದ್ದಾರೆ ಎಂದು ಅವರು ಸ್ಪಷ್ಟಣೆ ನೀಡಿದರು.