ಯಾರೀ ಸೈಲೆಂಟ್ ಸುನೀಲ? ಇಲ್ಲಿದೆ ಈತನ ಕ್ರೈಂ ಹಿನ್ನೆಲೆ

ಬೆಂಗಳೂರು: ರೌಡಿ ಸೈಲೆಂಟ್ ಸುನೀಲ್ ನೇತೃತ್ವದಲ್ಲಿ ಆಯೋಜಿಸಿದ್ದ ನಿನ್ನೆ (ನ.27) ರಕ್ತದಾನ ಶಿಬಿರದಲ್ಲಿ ಬಿಜೆಪಿ ನಾಯಕರು ಪಾಲ್ಗೊಂಡದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೈಲೆಂಟ್ ಸುನೀಲ್ ಕುಮಾರ್ಗೆ ಚುನಾವಣೆಗೆ ಸ್ಪರ್ಧಿಸುತ್ತಾರೆ.
ಕೊಲೆ, ಕೊಲೆಯತ್ನ, ದರೋಡೆ ಯತ್ನ ಸೇರಿ ಒಟ್ಟು 20 ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಸೈಲೆಂಟ್ ಸುನೀಲ
ಕಾಂಗ್ರೆಸ್ ಕಿಡಿ:ಸೈಲೆಂಟ್ ಸುನೀಲ್ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. 'ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ. ಆದರೆ ಬಿಜೆಪಿ ನಾಯಕರ ಜೊತೆಯಲ್ಲಿ ಇರುತ್ತಾನೆ. ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಅಂದ್ರೆ ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?' ಎಂದು ಟ್ವೀಟ್ ಮೂಲಕ ಕಿಡಿಕಾರಿದೆ.