ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರೋಲ್ಲ: ಮತ್ತೆ ಬಿಜೆಪಿನೇ ಬರುತ್ತದೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚುನಾವಣೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರೋದು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲ್ಲ. ಸುಮ್ಮನೆ ಅವರು ಹವಾ ಮಾಡುತ್ತಿದ್ದಾರೆ ಅಷ್ಟೇ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ತಲೆಕೆಡಿಸಿಕೊಳ್ಳಬೇಡಿ ಮುಂದೆ 2023ಕ್ಕೆ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರು.ರಮೇಶ್ ಜಾರಕಿಹೊಳಿ ಬಿಜೆಪಿ ಬಿಡ್ತಾರೆ ಅಂತಾ ಮಾಧ್ಯಮಗಳಲ್ಲಿ ಸೃಷ್ಟಿ ಮಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡುವುದಿಲ್ಲ. ಬಿಜೆಪಿಯಲ್ಲೇ ಇರೋನು ನಾನು, ಇಲ್ಲಿ ಒಂದು ಇತಿಹಾಸ ಮಾಡಿಯೇ ಹೋಗುತ್ತೇನೆ ಎಂದು ಹೇಳಿದರು.