ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ - ಸಚಿವ ಸುಧಾಕರ್ ಭವಿಷ್ಯ

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ - ಸಚಿವ ಸುಧಾಕರ್ ಭವಿಷ್ಯ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ( Congress Party ) ಅಧಿಕಾರಕ್ಕೆ ಬರುವುದಿಲ್ಲ. ಮತ್ತೆ ಬಿಜೆಪಿ ( BJP ) ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಈ ಬಾರಿ ಅಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ. ಅದಕ್ಕೆ ರಾಜ್ಯದ ಜನತೆಯೂ ಬಿಡುವುದಿಲ್ಲ ಎಂದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ರಾಜ್ಯದ ಜನತೆ ಬಿಜೆಪಿ ಪರ ಒಲವು ಹೊಂದಿದ್ದಾರೆ ಎಂದು ಹೇಳಿದರು.

ಬೆಂಗಳೂರಲ್ಲಿ SLV ಎಂಟರ್‌ ಪ್ರೈಸಸ್‌ ಮೇಲೆ ʼಚುನಾವಣಾಧಿಕಾರಿಗಳು ದಾಳಿ ʼ: BJP ಮುಖಂಡ ಮುನಿರಾಜುಗೆ ಸೇರಿದ ʼ2,500 ಸೀರೆಗಳ ಜಪ್ತಿʼ

ಬೆಂಗಳೂರು : ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ10 ರಂದು ಮತದಾನ ನಡೆಯಲಿದೆ. ಇದೀಗ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಈಗಾಗಲೇ ಮೂರು ಪಕ್ಷದ ನಾಯಕರು ಪ್ರಚಾರದಲ್ಲಿ ಕೈಗೊಂಡಿದ್ದಾರೆ.

ಇದೀಗ ರಾಜ್ಯದಲ್ಲಿ ಪೊಲೀಸರು ಫುಲ್‌ ಅಲರ್ಟ್‌ ಆಗಿದ್ದಾರೆ. ಹೀಗಾಗಿ ಬಹುತೇಕ ಜಿಲ್ಲೆಗಳಲ್ಲಿ ಚೆಕ್‌ ಪೋಸ್ಟ್‌ ತೆರೆಯಲಾಗಿದೆ. ಈ ವೇಳೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅದರಂತೆ ಇದೀಗ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಬೆಳ್ಳಿ, ಮದ್ಯ ವಶಕ್ಕೆ ಪಡೆಯಲಾಗಿದೆ.

ಇದೀಗ ಬೆಂಗಳೂರಿನ ಅಗ್ರಹಾರ ಬಡಾವಣೆಯಲ್ಲಿರುವ ಎಸ್‌ಎಲ್‌ವಿ ಎಂಟರ್‌ ಪ್ರೈಸಸ್‌ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದು,ಬಿಜೆಪಿ ಮುಖಂಡ ಮುನಿರಾಜುಗೆ ಸೇರಿದ 2,500 ಸೀರೆಗಳ ಜಪ್ತಿ ಮಾಡಲಾಗಿದೆ. ಸಂಪಿಗೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.