ಯಾವುದೇ ಕಾರಣಕ್ಕೂ ಸೈಲೆಂಟ್ ಸುನಿಲನನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ : ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಬೆಂಗಳೂರು : ನಾವು ಯಾವುದೇ ಕಾರಣಕ್ಕೂ ರೌಡಿಶೀಟರ್ ಸೈಲೆಂಟ್ ಸುನಿಲನನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ
ರೌಡಿಶೀಟರ್ ಸೈಲಂಟ್ ಸುನೀಲ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡಿದ್ದ. ಹೀಗಾಗಿ ಸೈಲೆಂಟ್ ಸುನೀಲ ಬಿಜೆಪಿ ಸೇರ್ಪಡೆಯಾಗಿ, ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಲಿದ್ದಾನೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟೀಕರಣ ನೀಡಿದ್ದು, ಯಾವುದೇ ಕಾರಣಕ್ಕೂ ಸೈಲೆಂಟ್ ಸುನಿಲ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.