ಯುಪಿಯ ಸಾನಿಯಾ ಮಿರ್ಜಾ ಭಾರತದ ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್

ಯುಪಿಯ ಸಾನಿಯಾ ಮಿರ್ಜಾ ಭಾರತದ ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್

ಮಿರ್ಜಾಪುರದ ಟಿವಿ ಮೆಕ್ಯಾನಿಕ್ ಅವರ ಪುತ್ರಿ ಸಾನಿಯಾ ಮಿರ್ಜಾ ಅವರು ಭಾರತೀಯ ವಾಯುಪಡೆಯಲ್ಲಿ ಫೈಟರ್ ಪೈಲಟ್ ಆಗಲು ಆಯ್ಕೆಯಾಗಿದ್ದಾರೆ. ದೇಶದ ಮೊದಲ ಮುಸ್ಲಿಂ ಹುಡುಗಿ & ರಾಜ್ಯದ ಮೊದಲ ಐಎಎಫ್ ಪೈಲಟ್ ಆಗಲಿದ್ದಾರೆ. ಸಾನಿಯಾ ಮಿರ್ಜಾ ಮಿರ್ಜಾಪುರ ದೇಹತ್ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋವರ್ ಗ್ರಾಮದ ನಿವಾಸಿ. ಎನ್‌ಡಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಅವರು ಈ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಡಿಸೆಂಬರ್ 27 ರಂದು ಅವರು ಪುಣೆಯಲ್ಲಿ ಎನ್‌ಡಿಎ ಖಡಕ್ವಾಸ್ಲಾಗೆ ಸೇರಲಿದ್ದಾರೆ.