ರಮ್ಯಾ ಸಹೋದರಿ ಇದ್ದಂತೆ ನನ್ನ ವಿರುದ್ಧ ಸ್ಪರ್ಧೆ ಮಾಡುವುದಾದರೆ ಮಾಡಲಿ ಕುಮಾರಸ್ವಾಮಿ

ರಮ್ಯಾ ಸಹೋದರಿ ಇದ್ದಂತೆ  ನನ್ನ ವಿರುದ್ಧ ಸ್ಪರ್ಧೆ ಮಾಡುವುದಾದರೆ ಮಾಡಲಿ  ಕುಮಾರಸ್ವಾಮಿ

ಬೆಂಗಳೂರು, ಫೆ.15: ಚನ್ನರಾಯಪಟ್ಟಣದಿಂದ ಕಾಂಗ್ರೆಸ್ ಪಕ್ಷದ ಪರವಾಗಿ ನಟಿ ರಮ್ಯಾ ಸ್ಪರ್ಧೆ ಮಾಡುವುದಾದರೆ ಮಾಡಲಿ, ಅವರು ಸಹೋದರಿ ಇದ್ದಂತೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಎಲ್ಲಿಬೇಕಾದರೂ ಸ್ಪರ್ಧೆ ಮಾಡಬಹುದು.

ನನ್ನ ವಿರುದ್ಧ ರಮ್ಯಾ ಸ್ಪರ್ಧೆ ಮಾಡಿದರೆ ಬೇಡ ಎನ್ನಲು ಸಾಧ್ಯವೇ. ಅಲ್ಲದೆ, ಆ ಸಹೋದರಿಗೂ ಒಳ್ಳೆಯದಾಗಲಿ ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿ ಭ್ರಷ್ಟಾಚಾರದ ಬಗ್ಗೆ ವಿಧಾನಸಭಾ ಕಲಾಪದಲ್ಲಿ ಚರ್ಚೆಯು ತೌಡು ಕುಟ್ಟುವ ಕೆಲಸವಾಗುತ್ತಿದೆ. ಚರ್ಚೆಯಿಂದ ಏನು ಸಾಧ್ಯಯಿಲ್ಲ. ಎಲ್ಲ ಭ್ರಷ್ಟಾಚಾರ ಆರೋಪಗಳಿಗೆ ದಾಖಲೆ ಒದಗಿಸಲು ಸಾಧ್ಯವಿಲ್ಲ ಎಂದ ಅವರು, ಬಿಜೆಪಿಯವರು ಅವರ ಆತ್ಮಸಾಕ್ಷಿಗೆ ಉತ್ತರ ಕೊಡಬೇಕು ಎಂದು ಹೇಳಿದರು