ರಸ್ತೆ ಅಪಘಾತದಲ್ಲಿ ಮೂವರು ಪತ್ರಕರ್ತರ ಸಾವು: 4 ಲಕ್ಷ ಪರಿಹಾರ ಘೋಷಿಸಿದ ಸಿಎಂ

ರಸ್ತೆ ಅಪಘಾತದಲ್ಲಿ ಮೂವರು ಪತ್ರಕರ್ತರ ಸಾವು: 4 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಭೋಪಾಲ್ - ವಿದಿಶಾ ರಸ್ತೆಯ ಲಂಬಖೇಡಾ ಬಳಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಡರಾತ್ರಿ ವಿದಿಶಾ ಪ್ರೆಸ್ ಕ್ಲಬ್ ಅಧ್ಯಕ್ಷ ರಾಜೇಶ್ ಶರ್ಮಾ ಮತ್ತು ಅವರ ಪತ್ರಕರ್ತ ಸಹೋದ್ಯೋಗಿಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಲಾಮತ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಪಘಾತಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸರ್ಕಾರದ ಪರವಾಗಿ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.